ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲೆಯಲ್ಲಿ ಶಿಕ್ಷಕರಾಗಿ, ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸಿ ಮಾ. 31ರಂದು ನಿವೃತ್ತಿ ಹೊಂದಿದ ಯಶೋಧರ ನಾರಾಲುರವರಿಗೆ ಬೀಳ್ಕೊಡುಗೆ ಕಾರ್ಯಕ್ರಮ ಏ. 5ರಂದು ನಡೆಯಿತು.

ವಿದ್ಯಾಬೋಧಿನೀ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷ ರಾಧಾಕೃಷ್ಣ ರಾವ್ ಯು ಅಧ್ಯಕ್ಷತೆ ವಹಿಸಿದ್ದರು. ಸುಳ್ಯ ಕ್ಷೇತ್ರ ಸಮನ್ವಯಾಧಿಕಾರಿ ಶ್ರೀಮತಿ ಶೀಥಲ್ ಯು.ಕೆ ಭಾಗವಹಿಸಿದ್ದರು. ವಿದ್ಯಾಬೋಧಿನೀ ವಿದ್ಯಾಸಂಸ್ಥೆಗಳ ಸಂಚಾಲಕರಾದ ಪಿ.ಜಿ.ಎಸ್.ಎನ್
ಪ್ರಸಾದ್ ನಿವೃತ್ತರನ್ನು ಸನ್ಮಾನಿಸಿ, ಶುಭ ಹಾರೈಸಿದರು. ಯಶೋಧರ ನಾರಾಲುರವರ ಶಿಷ್ಯ ಗುರುವಾಯನಕೆರೆ ಎಕ್ಸೆಲ್ ಶಿಕ್ಷಣ ಸಂಸ್ಥೆಯ ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥ ಈಶ್ವರ ಶರ್ಮ ಅಭಿನಂದನಾ ಮಾತುಗಳನ್ನಾಡಿದರು. ಬಾಳಿಲ ವಿದ್ಯಾಬೋಧಿನೀ ಎಜ್ಯುಕೇಶನ್ ಸೊಸೈಟಿಯ ಕೋಶಾಧಿಕಾರಿ ಕೈಂತಜೆ ರಾಮ ಭಟ್ ಗೌರವ ಉಪಸ್ಥಿತರಿದ್ದರು. ಸಿ.ಆರ್.ಪಿ. ಜಯಂತ ಕೆ, ಶಿಕ್ಷಣ ಸಂಯೋಜಕಿ ಶ್ರೀಮತಿ ಸಂಧ್ಯಾಕುಮಾರಿ ವೇದಿಕೆಯಲ್ಲಿದ್ದರು. ಶಾಲಾ ವಿದ್ಯಾರ್ಥಿನಿ ಕು. ಕ್ಷಮಾ, ಸಹ ಶಿಕ್ಷಕಿ ಶ್ರೀಮತಿ ಸಹನಾ ಬಿ.ಬಿ, ನಿವೃತ್ತ ಮುಖ್ಯೋಪಾಧ್ಯಾಯ ಜತ್ತಪ್ಪ ಗೌಡ ನಿವೃತ್ತರಿಗೆ ಶುಭ ಹಾರೈಸಿದರು.

ಶಾಲಾ ಮುಖ್ಯೋಪಾಧ್ಯಾಯರಾದ ಉದಯಕುಮಾರ್ ರೈ ಎಸ್ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿ, ಹಿಂದಿ ಶಿಕ್ಷಕ ಲೋಕೇಶ್ ಬೆಳ್ಳಿಗೆ ವಂದಿಸಿದರು. ಶಾಲಾ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಸಂಸ್ಕೃತ ಶಿಕ್ಷಕ ವೆಂಕಟೇಶ ಕುಮಾರ್ ಉಳುವಾನ ಕಾರ್ಯಕ್ರಮ ನಿರೂಪಿಸಿದರು. ಶಾಲಾ ಎಸ್.ಡಿ.ಎಂ.ಸಿ ಮತ್ತು ರಕ್ಷಕ ಶಿಕ್ಷಕ ಸಂಘದ ಪದಾಧಿಕಾರಿಗಳು, ಶಾಲಾ ಶಿಕ್ಷಕ ವೃಂದದವರು, ಸಿಬ್ಬಂದಿಗಳು, ಪೋಷಕರು, ವಿದ್ಯಾರ್ಥಿ ವೃಂದ, ಶಾಲಾಭಿಮಾನಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.