ಐವರ್ನಾಡು ಗ್ರಾಮ ಪಂಚಾಯತ್ ವತಿಯಿಂದ ಬೃಹತ್ ಸ್ವಚ್ಛತಾ ಕಾರ್ಯಕ್ರಮ

0

ಐವರ್ನಾಡು ಗ್ರಾಮ ಪಂಚಾಯತ್ ವತಿಯಿಂದ ನಡೆಯುವ ಮಾಸಿಕ ಸ್ವಚ್ಛತಾ ಕಾರ್ಯಕ್ರಮವು ಎ.6 ರಂದು ನಡೆಯಿತು.
ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ದ ವ್ಯವಸ್ಥಾಪನಾ ಸಮಿತಿಯ ಸಹಯೋಗದೊಂದಿಗೆ ಐವರ್ನಾಡು ಗ್ರಾಮ ಪಂಚಾಯತ್ ವಠಾರ ಹಾಗೂ ಮುಖ್ಯ ರಸ್ತೆ ಯ ಬದಿಯಲ್ಲಿ ಐವರ್ನಾಡು ಗ್ರಾಮ ಪಂಚಾಯತ್ ವಠಾರದಿಂದ ಮರ್ವತ್ತಡ್ಕದ
ವರೆಗೆ ನಡೆಯಿತು .


ಈ ಸ್ವಚ್ಛತಾ ಕಾರ್ಯಕ್ರಮದಲ್ಲಿ ಐವರ್ನಾಡು ಗ್ರಾಮ ಪಂಚಾಯತ್ ನ ಅಧ್ಯಕ್ಷರು, ಸದಸ್ಯರು, ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರು, ಸದಸ್ಯರು, ಪಂಚಾಯತ್ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಸಿಬ್ಬಂದಿಗಳು, ಊರಿನ ಪ್ರಮುಖರು ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸಿದರು.ಈ ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗವಹಿಸಿದವರಿಗೆ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ದ ವ್ಯವಸ್ಥಾಪನ ಸಮಿತಿಯವರು ಲಘು ಉಪಹಾರದ ವ್ಯವಸ್ಥೆ ಮಾಡಿದ್ದರು.