Home Uncategorized ಸುಳ್ಯ ಬ್ಲಾಕ್ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಸಭೆ

ಸುಳ್ಯ ಬ್ಲಾಕ್ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಸಭೆ

0

ಸುಳ್ಯ ಬ್ಲಾಕ್ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ಇದರ ಸಭೆ ಎ. 5ರಂದು ಸುಳ್ಯದ ಯುವಜನ ಸಂಯುಕ್ತ ಮಂಡಳಿ ಸಭಾಂಗಣದಲ್ಲಿ ನಡೆಯಿತು.
ಸುಳ್ಯ ಬ್ಲಾಕ್ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಅಧ್ಯಕ್ಷ ಜಯಪ್ರಕಾಶ್ ನೆಕ್ರಪ್ಪಾಡಿ ಅಧ್ಯಕ್ಷತೆ ವಹಿಸಿದ್ದರು.

ದ.ಕ ಜಿಲ್ಲಾ ಪಂಚಾಯತ್ ರಾಜ್ ಸಂಘಟನೆಯ ಅಧ್ಯಕ್ಷರಾದ ಶುಭಾಶ್ಚಂದ್ರ ಕೊಳ್ನಾಡು ಮಾತನಾಡಿ ಪಂಚಾಯತ್ ರಾಜ್ ಸಂಘಟನೆಯನ್ನು ಗ್ರಾಮ ಮಟ್ಟದಲ್ಲಿ ಬಲಿಷ್ಠ ಗೊಳಿಸಲು ಕಾರ್ಯಪಡೆ ರಚಿಸುವ ಬಗ್ಗೆ ಮತ್ತು ತಾಲೂಕು ಸಮಿತಿಯನ್ನು ಬಲಿಷ್ಠ ವಾಗಿ ಸಂಘಟಿಸುವ ಬಗ್ಗೆ ಮಾರ್ಗದರ್ಶನ ನೀಡಿದರು.

ಶೀಘ್ರದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯುವ ಹಿನ್ನಲೆಯಲ್ಲಿ ಗ್ರಾಮ ಪಂಚಾಯತ್ ಪ್ರತಿನಿಧಿಗಳು, ಮಾಜಿ ಸದಸ್ಯರು, ಪರಾಜಿತ ಅಭ್ಯರ್ಥಿ ಗಳ ಸಮಾವೇಶ ಮತ್ತು ಕಾರ್ಯಗಾರ ನಡೆಸುವ ಬಗ್ಗೆ ಸಲಹೆ ನೀಡಿದರು. ವೇದಿಕೆಯಲ್ಲಿ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಭವಾನಿಶಂಕರ್ ಕಲ್ಮಡ್ಕ, ಜಿಲ್ಲಾ ಸದಸ್ಯ ಅಶೋಕ್ ಚೂಂತಾರು ಉಪಸ್ಥಿತರಿದ್ದರು. ಸಂಘಟನೆಯ ಗ್ರಾಮ ಪಂಚಾಯತ್ ಮಟ್ಟದ ಪ್ರತಿನಿಧಿಗಳು ಭಾಗವಹಿಸಿದ್ದರು. ಭವಾನಿಶಂಕರ್ ಕಲ್ಮಡ್ಕ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಅಶೋಕ್ ಚೂಂತಾರು ವಂದಿಸಿದರು.

NO COMMENTS

error: Content is protected !!
Breaking