ಹುರಿದ ಅಡಿಕೆ ಆಮದಿಗೆ ತಡೆ ನೀಡಿದ ಕೇಂದ್ರ ಸರ್ಕಾರ
ಕೇಂದ್ರ ಸರ್ಕಾರ ಕ್ರಮವನ್ನು ಶ್ಲಾಘಿಸಿದ ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕೊಡ್ಗಿ
ವಿದೇಶ ವ್ಯಾಪಾರ ನಿರ್ದೇಶನಾಲಯ (ಆಉಈಖಿ)ದ ಐಟಿಸಿ(ಹೆಚ್.ಎಸ್)ಕೋಡ್ ೨೦೦೮೧೯೨೦ ಅಡಿಯಲ್ಲಿ ಪರಿಗಣಿತವಾಗಿದ್ದ ಹುರಿದ ಅಡಿಕೆಯ ಅನಿರ್ಬಂಧಿತ ವ್ಯಾಪಾರವನ್ನು ರದ್ದುಗೊಳಿಸುವ ಮೂಲಕ, `ರೋಸ್ಟೆಡ್ ನಟ್ಸ್ ಮತ್ತು ಸೀಡ್ಸ್’ ಶಿರೋನಾಮೆಯ ಮೂಲಕ ಆಮದಾಗುತ್ತಿದ್ದ ಅಡಿಕೆಗೆ ನಿರ್ಬಂಧ ಹೇರಿರುವ ಕೇಂದ್ರ ಸರಕಾರದ ಕ್ರಮ ಶ್ಲಾಘನೀಯ ಎಂದು ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿಯವರು ತಿಳಿಸಿದ್ದಾರೆ.
ಏ.೨ರಂದು ಕೇಂದ್ರ ಸರಕಾರದ ವಾಣಿಜ್ಯ ಇಲಾಖೆಯು ಈ ಕುರಿತು ಅಧಿಸೂಚನೆಯನ್ನು ಹೊರಡಿಸಿದೆ.ಅದರ ಪ್ರಕಾರ ಐಟಿಸಿ (ಎಚ್‌ಎಸ್) ಕೋಡ್ ೦೮೦೨೮೦೯೦ ಮತ್ತು ೨೦೦೮೧೯೨೦ ಅಡಿಯಲ್ಲಿ ಬರುವ ಹುರಿದ ಅಡಿಕೆಯನ್ನು “ಉಚಿತ”ದಿಂದ “ನಿಷೇಧಿತ” ಎಂದು ಪರಿಷ್ಕರಿಸಿ ವರ್ಗೀಕರಿಸಲಾಗಿದೆ.ಆದಾಗ್ಯೂ, ಕನಿಷ್ಠ ಆಮದು ದರವನ್ನು ಪ್ರತೀ ಕೆಜಿ ಗೆ ರೂ.೩೫೧ ನಿಗದಿ ಪಡಿಸಿದ್ದು, ಆಮದು ಮಾಡಲ್ಪಡುವ ಅಡಿಕೆಯ ವೆಚ್ಚ, ವಿಮೆ ಮತ್ತು ಸರಕು ಸಾಗಣೆ ಮೌಲ್ಯವು ಪ್ರತಿ ಕಿಲೋಗ್ರಾಂಗೆ ರೂ.೩೫೧ ಮತ್ತು ಅದಕ್ಕಿಂತ ಹೆಚ್ಚಿದ್ದರೆ, ೧೦೦ಶೇ. ರಫ್ತು ಆಧಾರಿತ ಘಟಕಗಳು (ಇಔUಗಳು), SಇZ ನಲ್ಲಿರುವ ಘಟಕಗಳು ಮತ್ತು ಮುಂಗಡ ಅಧಿಕಾರ ಯೋಜನೆಯಡಿಯಲ್ಲಿ ಆಮದು ಮಾಡಿಕೊಳ್ಳುವ ಅಡಿಕೆಗೆ ಒIP ಷರತ್ತುಗಳು ಅನ್ವಯವಾಗುವುದಿಲ್ಲ.ಈ ಸಂಖ್ಯೆಯಡಿಯಲ್ಲಿ ಎಲ್ಲಾ ರೀತಿಯ ಸಂಸ್ಕರಿತ ಅಡಿಕೆಯನ್ನು ಸೇರಿಸಲಾಗಿದ್ದು, ಈಗ ಹುರಿದ ಅಡಿಕೆಯು ಸಹ ಸೇರ್ಪಡೆಗೊಂಡಿದೆ.ಕೆಲವು ತಿಂಗಳುಗಳ ಹಿಂದೆ ಹುರಿದ ಅಡಿಕೆ ಹೆಚ್ಚಿನ ಪ್ರಮಾಣದಲ್ಲಿ ಭಾರತದ ಮಾರುಕಟ್ಟೆಗೆ ಬಂದಿದ್ದರ ಪರಿಣಾಮ ಪಟೋರ ಮತ್ತಿತರ ಕೆಳದರ್ಜೆಯ ಅಡಿಕೆಯ ದರ ಕಡಿಮೆಯಾಗಿರುವುದಲ್ಲದೇ ಬೇಡಿಕೆ ಕುಂಠಿತವಾಗಿದ್ದನ್ನು ಗಮನಿಸಬಹುದಾಗಿದೆ.ಕೇಂದ್ರ ಸರಕಾರದ ಕ್ರಮದಿಂದ ಬೆಳೆಗಾರರು ನಿಟ್ಟುಸಿರು ಬಿಡುವಂತಾಗಿದೆ ಎಂದು ಕಿಶೋರ್ ಕುಮಾರ್ ಕೊಡ್ಗಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.