ಕಂಟೈನರ್ ಲಾರಿ ಮತ್ತು ಕಾರಿನ ಮಧ್ಯೆ ಅಪಘಾತವಾಗಿದ್ದು, ಪ್ರಯಾಣಿಕರು ಅಪಾಯದಿಂದ ಪಾರಾದ ಘಟನೆ ಅರಂತೋಡಿನಲ್ಲಿ ಏ.8 ರಂದು ಸಂಭವಿಸಿದೆ.

ಸುಳ್ಯದಿಂದ ಮಡಿಕೇರಿಗೆ ತೆರಳುತ್ತಿದ್ದ ಕಾರು ಹಾಗೂ ಮಡಿಕೇರಿಯಿಂದ ಸುಳ್ಯಕ್ಕೆ ಬರುತ್ತಿದ್ದ ಕಂಟೈನರ್ ಲಾರಿ ಅರಂತೋಡು ಕಾಮಧೇನು ಹೋಟೆಲ್ ಮುಂಭಾಗದ ಮುಖ್ಯ ರಸ್ತೆಯಲ್ಲಿ ಬೇರೊಂದು ವಾಹನವನ್ನು ಓವರ್ ಟೇಕ್ ಮಾಡುವ ಯತ್ನದಲ್ಲಿ ಮುಂಭಾದಿಂದ ಬಂದ ಕಾರಿಗೆ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ವಾಹನ ಮುಂಭಾಗ ಜಖಂಗೊಂಡಿದೆ.