ಕರ್ನಾಟಕ ರಾಜ್ಯ ರೈತ ಉತ್ಪಾದಕರ ಸಂಸ್ಥೆಗಳ ಸಹಕಾರ ಸಂಘ ಬೆಂಗಳೂರು ಇದರ ಮೈಸೂರು ವಿಭಾಗದ ನಿರ್ದೇಶಕರಾಗಿ ಆಯ್ಕೆಯಾಗಿರುವ ಸುಳ್ಯ ರೈತ ಉತ್ಪಾದಕ ಸಂಘದ ಅಧ್ಯಕ್ಷರಾದ ವೀರಪ್ಪ ಗೌಡ ಕಣ್ಕಲ್ ರನ್ನು ಎ.8ರಂದು ಸಂಸ್ಥೆಯ ವತಿಯಿಂದ ಸುಳ್ಯ ಎ.ಪಿ.ಎಂ.ಸಿ. ಸಭಾಂಗಣದಲ್ಲಿ ಗೌರವಿಸಲಾಯಿತು.
ವಿಶ್ರಾಂತ ಪ್ರಾಂಶುಪಾಲ ಪ್ರೊ.ಬಾಲಚಂದ್ರ ಗೌಡರು ವೀರಪ್ಪ ಗೌಡ ಕಣ್ಕಲ್ ಮತ್ತು ಕಲಾವತಿ ದಂಪತಿಗಳನ್ನು ಅಭಿನಂದಿಸಿದರು.

ಸುಳ್ಯ ಗೌಡರ ಯುವ ಸೇವಾ ಸಂಘದ ಪೂರ್ವಾಧ್ಯಕ್ಷ ದಿನೇಶ್ ಮಡಪ್ಪಾಡಿಯವರು ಅಭಿನಂದನಾ ಭಾಷಣ ಮಾಡಿದರು.
ಸುಳ್ಯ ತೋಟಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕಿ ಶ್ರೀಮತಿ ಸುಹಾನ, ಸುಳ್ಯ ಎ.ಪಿ.ಎಂ.ಸಿ. ಕಾರ್ಯದರ್ಶಿ ರವೀಂದ್ರ, ರೈತ ಉತ್ಪಾದಕ ಕಂಪನಿಯ ಕಾರ್ಯದರ್ಶಿ ಹರೀಶ್ ವೇದಿಕೆಯಲ್ಲಿ ಇದ್ದರು.
ಪಂಜ ರೈತ ಉತ್ಪಾದಕ ಕಂಪೆನಿಯ ಅಧ್ಯಕ್ಷ ತೀರ್ಥಾನಂದ ಕೊಡೆಂಕಿರಿ, ಕಡಬ ರೈತ ಉತ್ಪಾದಕ ಕಂಪೆನಿ ಅಧ್ಯಕ್ಷ ವೆಂಕಪ್ಪ ಗೌಡ ಕೋಡಿಬೈಲು ಶುಭಹಾರೈಸಿದರು.
ನಿರ್ದೇಶಕರಾದ ಎಂ.ಡಿ. ವಿಜಯಕುಮಾರ್ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ನಿರ್ದೇಶಕ ಧರ್ಮಪಾಲ ಐವರ್ನಾಡು ಕಾರ್ಯಕ್ರಮ ನಿರೂಪಿಸಿದರು.