
ಸುಳ್ಯದ ಕೊಡಿಯಾಲಬೈಲು ಮಹಾತ್ಮ ಗಾಂಧಿ ಮಲ್ನಾಡ್ ವಿದ್ಯಾಸಂಸ್ಥೆಯಲ್ಲಿ ಶಿಕ್ಷಕರಿಗೆ ತರಬೇತಿ ಕಾರ್ಯಕ್ರಮ ಎ.7ರಂದು ನಡೆಯಿತು.

ಶಾಲಾ ಸಂಚಾಲಕರಾದ ದೊಡ್ಡಣ್ಣ ಬರೆಮೇಲುರವರುಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.
ನಿವೃತ್ತ ಮುಖ್ಯ ಶಿಕ್ಷಕ ಹಾಗೂ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದ ದಯಾನಂದ ಎನ್.ಕೆ ರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಗೌಡ ಸೋಶಿಯೋ ಫೌಂಡೇಶನ್ ನ ಅಧ್ಯಕ್ಷರಾದ ಪಿ.ಎಸ್. ಗಂಗಾಧರರವರು ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾದ ಜೆ.ಸಿ.ಸೀತಾರಾಮ ಕೇವಳರವರು ಶಿಕ್ಷಕರಿಗೆ ಕ್ರಿಯಾತ್ಮಕ ಚಟುವಟಿಕೆಗಳ ಮೂಲಕ ತರಬೇತಿ ನೀಡಿದರು.

ಈ ಸಂದರ್ಭದಲ್ಲಿ ಇತ್ತೀಚೆಗೆ ಜನಸಿರಿ ಫೌಂಡೇಶನ್ ವತಿಯಿಂದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಯನ್ನು ಸ್ವೀಕರಿಸಿದ ಪ್ರೌಢಶಾಲಾ ವಿಭಾಗದ ಶಿಕ್ಷಕಿ ಪರಿಮಳಾ ಮತ್ತು ಕಳೆದ ಮೂರು ವರ್ಷಗಳಿಂದ ನರ್ಸರಿ ವಿಭಾಗದ ಶಿಕ್ಷಕಿಯಾಗಿ ಸೇವೆ ಸಲ್ಲಿಸಿ,ಈ ವರ್ಷ ತೆರಳಲಿರುವ ಸೌಮ್ಯ ರವರನ್ನು ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ನಿರ್ದೇಶಕರುಗಳಾದ ಬೆಳ್ಯಪ್ಪ ಗೌಡ, ಚಂದ್ರಶೇಖರ ಪೇರಾಲು, ವೀರಪ್ಪ ಗೌಡ ಕಣ್ಕಲ್,ಸೂರಯ್ಯ ಗೌಡ ಸೂಂತೋಡು, ಪುಷ್ಪಾವತಿ ರಾಧಾಕೃಷ್ಣ ಮಾಣಿಬೆಟ್ಟು ಹಾಗೂ ಶೈಲೇಶ್ ಅಂಬೆಕಲ್ಲು ರವರು ಉಪಸ್ಥಿತರಿದ್ದರು.
ಶಾಲಾ ಶಿಕ್ಷಕಿ ಅಶ್ವಿನಿ ವಂದಿಸಿದರು. ಶಿಕ್ಷಕಿ ಶ್ರುತಿ ಕಾರ್ಯಕ್ರಮ ನಿರೂಪಿಸಿದರು.
