ದುಗ್ಗಲಡ್ಕ ಸರಕಾರಿ ಪ್ರೌಢಶಾಲೆಯಲ್ಲಿ ಸಮುದಾಯ ದತ್ತ ಶಾಲಾ ಕಾರ್ಯಕ್ರಮ

0

ದುಗ್ಗಲಡ್ಕ ಸರಕಾರಿ ಪ್ರೌಢಶಾಲೆಯಲ್ಲಿ ಶೈಕ್ಷಣಿಕ ವರ್ಷದ 2 ನೇ ಸಮುದಾಯದತ್ತ ಶಾಲಾ ಕಾರ್ಯಕ್ರಮ ಇಂದು ನಡೆಯಿತು.
ಶಾಲಾ ಎಸ್.ಡಿ.ಎಂ.ಸಿ.ಅಧ್ಯಕ್ಷ ಬಿ.ನಾರಾಯಣ ಟೈಲರ್ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಮುಖ್ಯ ಶಿಕ್ಷಕ ಸುರೇಶ್ ಕುಮಾರ್ ಪಿ., ಗಣಿತ ಶಿಕ್ಷಕ ಉದಯಕುಮಾರ್, ನಿವೃತ್ತ ಮುಖ್ಯ ಶಿಕ್ಷಕ ಚಂದ್ರಶೇಖರ ಗೌಡ ಮೋಂಟಡ್ಕ, ನಗರ ಪಂಚಾಯತ್ ಮಾಜಿ ಅಧ್ಯಕ್ಷೆ ಶ್ರೀಮತಿ ಶೀಲಾವತಿ ಮಾಧವ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಮೇಶ್ ನೀರಬಿದಿರೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಶಿಕ್ಷಕರು ಶಾಲಾ ಶೈಕ್ಷಣಿಕ ಪ್ರಗತಿ ಮತ್ತು ಶಾಲಾಭಿವೃದ್ದಿಯ ಬಗ್ಗೆ ವಿವರಿಸಿದರು. ಮಕ್ಕಳ ಶೈಕ್ಷಣಿಕ ಪ್ರಗತಿಗೆ ಶಿಕ್ಷಕ‌ರ ಪ್ರಯತ್ನಕ್ಕೆ ಪೋಷಕರ ಸಹಕಾರ ಅಗತ್ಯ,ಶಾಲಾ ಚಟುವಟಿಕೆಯಲ್ಲಿ ಪೋಷಕರು ನಮ್ಮದೇ ಶಾಲೆ ಎಂದು ಭಾಗವಹಿಸಬೇಕು.ಎಂದರು.

ವಿದ್ಯಾರ್ಥಿನಿ ಅನನ್ಯ ಪ್ರಾರ್ಥಿಸಿದರು, ಸಹಶಿಕ್ಷಕಿ ಶ್ರೀಮತಿ ಶೋಭಾ ಸ್ವಾಗತಿಸಿ, ಶಿಕ್ಷಕ ಉದಯಕುಮಾರ್ ವಂದಿಸಿದರು.
ಕನ್ನಡ ಶಿಕ್ಷಕ ಉಣ್ಣಿಕೃಷ್ಣ ಪ್ರಾಸ್ತಾವಿಕವಾಗಿ ಮಾತನಾಡಿ ಕಾರ್ಯಕ್ರಮ ನಿರೂಪಿಸಿದರು.
ಎಸ್ ಡಿ ಎಂ.ಸಿ.ಸದಸ್ಯರು, ಪೋಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.