ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಭೇಟಿ
ಸುಳ್ಯದ ಶ್ರೀ ಕಲ್ಕುಡ ದೈವಸ್ಥಾನದಲ್ಲಿ ಜೀರ್ಣೋದ್ಧಾರ ಕಾರ್ಯದ ಸಲುವಾಗಿ ದೇಲಂಪಾಡಿ ಬ್ರಹ್ಮಶ್ರೀ ವೇದಮೂರ್ತಿ ಗಣೇಶ ತಂತ್ರಿಯವರ ನೇತೃತ್ವದಲ್ಲಿ ವೈದಿಕ ಕಾರ್ಯಕ್ರಮಗಳು ಹಾಗೂ ನಿಧಿ ಕುಂಭ ಸಮರ್ಪಣೆಯು ಎ.12 ರಂದು ಮಧ್ಯಾಹ್ನ ಜರುಗಿತು.

ಈ ಸಂದರ್ಭದಲ್ಲಿ ಸುಳ್ಯದ ಸಿ.ಎ.ಬ್ಯಾಂಕಿನ ನೂತನ ಕಟ್ಟಡ ಉದ್ಘಾಟನೆಗೆ ಆಗಮಿಸಿದ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡರು ದೈವಸ್ಥಾನಕ್ಕೆ ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು. ಧರ್ಮದರ್ಶಿ ಮಂಡಳಿ ಅಧ್ಯಕ್ಷ ಪಿ.ಕೆ.ಉಮೇಶ್ ಹಾಗೂ ಮಂಡಳಿಯ ಸದಸ್ಯರು ಸ್ವಾಗತಿಸಿದರು. ಸ್ಥಳೀಯ ಭಕ್ತಾದಿಗಳು ಉಪಸ್ಥಿತರಿದ್ದರು.