ನಲಿ ಕಲಿ ಮಕ್ಕಳ ಬೇಸಿಗೆ ಶಿಬಿರ ಉದ್ಘಾಟನೆ
“ಬೇಸಿಗೆ ಶಿಬಿರದಲ್ಲಿ ವಿವಿಧ ಸಂಪನ್ಮೂಲ ವ್ಯಕ್ತಿಗಳು ನೀಡುವ ತರಬೇತಿ ಮಕ್ಕಳ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾಗುತ್ತದೆ” ಎಂದು ಪಂಜದ ಉತ್ಕರ್ಷ ಸಹಕಾರ ಸೌಧದಲ್ಲಿ ನಲಿ ಕಲಿ ಮಕ್ಕಳ ಬೇಸಿಗೆ ಶಿಬಿರ ಉದ್ಘಾಟಿಸಿ ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು.ಕ್ರಿಯೇಟಿವ್ ಚಿತ್ರಕಲಾ ಶಾಲೆ, ಪಂಜ ಇದರ ನೇತೃತ್ವದಲ್ಲಿ ಲಯನ್ಸ್ ಕ್ಲಬ್ ಪಂಜ, ನಿನಾದ ಸಾಂಸ್ಕೃತಿಕ ಕೇಂದ್ರ ತಂಟೆಪ್ಪಾಡಿ ಹಾಗೂ ಕಲಾಮಂದಿರ ಡ್ಯಾನ್ಸ್ ಕ್ರೀವ್ ಪಂಜ ಇವುಗಳ ಸಹಕಾರದೊಂದಿಗೆ ಒಂದು ವಾರಗಳ ಕಾಲ ನಡೆಯುವ ರಾಜ್ಯ ಮಟ್ಟದ ಮಕ್ಕಳ ಬೇಸಿಗೆ ಶಿಬಿರ ಉದ್ಘಾಟನೆಗೊಂಡಿತು. ಸೋಮಶೇಖರ ನೇರಳ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡುತ್ತಾ ‘ಅದ್ದೂರಿ ಆಡಂಬರಕ್ಕಿಂತ ಅರ್ಥಪೂರ್ಣ ಶಿಬಿರ ಆಯೋಜಿಸುವುದು ನಮ್ಮ ಗುರಿ’ ಎಂದರು. ಕಡಬ ಸೈಂಟ್ ಜೋಕಿಮ್ಸ್ ಶಿಕ್ಷಣ ಸಂಸ್ಥೆಗಳ ಸಂಚಾಲಕ ವಂ.ಫಾ. ಪ್ರಕಾಶ್ ಪೌಲ್ ಡಿಸೋಜ, ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಚಂದ್ರಶೇಖರ ಶಾಸ್ತ್ರಿ, ಸುಬ್ರಹ್ಮಣ್ಯ ಕುಮಾರಸ್ವಾಮಿ ವಿದ್ಯಾಲಯದ ಮುಖ್ಯ ಶಿಕ್ಷಕಿ ವಿದ್ಯಾರತ್ನ, ಪೈಂದೋಡಿ ಸುಬ್ರಾಯ ಸ್ವಾಮಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಕೇಶವ ಕುದ್ವ, ಯುವಜನ ಸಂಯುಕ್ತ ಮಂಡಳಿ ಉಪಾಧ್ಯಕ್ಷ ಪವನ್ ಪಲ್ಲತ್ತಡ್ಕ, ಶಾರದಾಂಬ ಭಜನಾ ಮಂಡಳಿ ಅಧ್ಯಕ್ಷ ಮೇದಪ್ಪ ಗೌಡ ,ಜೇಸಿಐ ಪಂಜ ಪಂಚಶ್ರೀ ಅಧ್ಯಕ್ಷ ವಾಚಣ್ಣ ಕೆರೆಮೂಲೆ, ಕಲಾಮಂದಿರ ಡ್ಯಾನ್ಸ್ ಕ್ರೂ ಸಂಚಾಲಕ ಪ್ರಮೋದ್ ಬೆಳ್ಳಾರೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕ್ರಿಯೇಟಿವ್ ಚಿತ್ರಕಲಾ ಶಾಲೆಯ ಚಿತ್ರಕಲಾ ಶಿಕ್ಷಕ ಸತೀಶ್ ಪಂಜ ಸಭಾಧ್ಯಕ್ಷತೆ ವಹಿಸಿದ್ದರು. ಕುಮಾರ್ ಕಟ್ಟೆ ಬೆಳಗೊಳಿ ಪ್ರಾರ್ಥಿಸಿ ಶಶಿಧರ ಪಳಂಗಾಯ ದನ್ಯವಾದ ಸಲ್ಲಿಸಿದರು. ತೀರ್ಥಾನಂದ ಕೊಡೆಂಕೇರಿ ನಿರೂಪಿಸಿದರು.