ಮರಾಟಿ ಸಮಾಜ ಸೇವಾ ಸಂಘ ಸುಳ್ಯ ತಾಲೂಕು, ಮರಾಟಿ ಯುವ ವೇದಿಕೆ ಸುಳ್ಯ ಇದರ ಆಶ್ರಯದಲ್ಲಿ ಮರಾಟಿ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟ ಎ.13 ಮತ್ತು 14 ರಂದು ಸುಳ್ಯ ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆಯುತ್ತಿದ್ದು, ಎ.14 ರಂದು ಬೆಳಿಗ್ಗೆ ಉದ್ಘಾಟನಾ ಕಾರ್ಯಕ್ರಮ ನಡೆಯಿತು.

ಸುಳ್ಯ ಮೆಸ್ಕಾಂ ನ ಎಇಇ ಹರೀಶ್ ನಾಯ್ಕ್ ಪಂದ್ಯಾಟವನ್ನು ಉದ್ಘಾಟಿಸಿದರು. ಮರಾಟಿ ಸಮಾಜ ಸೇವಾ ಸಂಘದ ಗೌರವಾಧ್ಯಕ್ಷ ಜನಾರ್ದನ ಬಿ.ಕುರುಂಜಿಭಾಗ್ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಮರಾಟಿ ಮಹಿಳಾ ವೇದಿಕೆಯ ಅಧ್ಯಕ್ಷೆ ಶ್ರೀಮತಿ ರೇವತಿ ದೊಡ್ಡೇರಿ, ಸುಳ್ಯ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯ ಭವಾನಿಶಂಕರ ಕಲ್ಮಡ್ಕ, ಸೌತ್ ಇಂಡಿಯಾ ಮಾಸ್ಟರ್ ಅತ್ಲೆಟಿಕ್ ಕೆ.ಕೃಷ್ಣಪ್ಪ ನಾಯ್ಕ್, ಮರಾಟಿ ಸಮಾಜ ಸೇವಾ ಸಂಘದ ಮಾಜಿ ಅಧ್ಯಕ್ಷ ನಾರಾಯಣ ನಾಯ್ಕ್ ಬೀರಮಂಗಲ, ಕೋಶಾಧಿಕಾರಿ ಐತಪ್ಪ ನಾಯ್ಕ್ ಎನ್.,ಯುವ ವೇದಿಕೆಯ ಅಧ್ಯಕ್ಷ ಉದಯಕುಮಾರ್ ಮಾಣಿಬೆಟ್ಟು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪಂದ್ಯಾಟದ ಆರಂಭದಲ್ಲಿ ಮರಾಟಿ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಬಾಲಕೃಷ್ಣ ನಾಯ್ಕ್ ಅಜ್ಜಾವರ ಕ್ರೀಡಾ ಪಟುಗಳಿಗೆ ಶುಭ ಹಾರೈಸಿದರು.
ಮರಾಟಿ ಸಮಾಜ ಸೇವಾ ಸಂಘದ ಕಾರ್ಯದರ್ಶಿ ರಮೇಶ್ ನೀರಬಿದಿರೆ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.