ಅದ್ದೂರಿ ಕಾರ್ಯಕ್ರಮಕ್ಕೆ ಸಿದ್ಧತೆ
ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹೆದ್ದಾರಿ ಹಬ್ಬಗಳ ಆಚರಣಾ ಸಮಿತಿ ಸುಳ್ಯ ತಾಲೂಕು ಇದರ ಆಶ್ರಯದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ರವರ 134 ನೇ ಜನ ದಿನಾಚರಣೆ ಎ.14ರಂದು ಸುಳ್ಯದಲ್ಲಿ ನಡೆಯಲಿದೆ.
ಬೆಳಗ್ಗೆ 9 ಗಂಟೆಗೆ ಸುಳ್ಯಜ್ಯೋತಿ ಸರ್ಕಲ್ ಬಳಿಯಿಂದ ಮೆರವಣಿಗೆ ಆರಂಭವಾಗಲಿದೆ. ಅಂಬೇಡ್ಕರ್ ರವರ ಪ್ರತಿಮೆಯನ್ನು ತೆರೆದ ವಾಹನದಲ್ಲಿ ಇಟ್ಟು ಮೆರವಣಿಗೆಯಲ್ಲಿ ಸಾಗಲಾಗುವುದು. ಬೆಳಗ್ಗೆ 10.30 ಕ್ಕೆ ಕೇರ್ಪಳ ಬಂಟರ ಭವನದಲ್ಲಿ ಸಭಾ ಕಾರ್ಯಕ್ರಮ ನಡೆಯುವುದು.
ಶಾಸಕಿ ಭಾಗೀರಥಿ ಮುರುಳ್ಯ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಹಲವು ಮಂದಿ ಗಣ್ಯರು ಸಮಾರಂಭದಲ್ಲಿ ಭಾಗವಹಿಸಲಿದ್ದು, ಸುರತ್ಕಲ್ ನ ಗೋವಿಂದದಾಸ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಡಾ. ಆಶಾಲತಾ ಪಿ ಉಪನ್ಯಾಸ ನೀಡಲಿದ್ದಾರೆ.