ಅನ್ಸಾರ್ ವತಿಯಿಂದ ಹಜ್ ತರಬೇತಿ ಶಿಬಿರ ಹಾಗೂ ಬೀಳ್ಕೊಡುಗೆ ಸಮಾರಂಭ

0

ಅನ್ಸಾರುಲ್ ಮುಸ್ಲಿಮೀನ್ ಅಸೋಸಿಯೇಷನ್ ಗಾಂಧಿನಗರ ಇದರ ವತಿಯಿಂದ ಪವಿತ್ರ ಹಜ್ ಯಾತ್ರೆಗೆ ತೆರಳಿರುವ ಹಜ್ಜಾಜಿಗಳಿಗೆ ಬೀಳ್ಕೊಡುಗೆ ಸಮಾರಂಭ ಹಾಗೂ ಹಜ್ ತರಬೇತಿ ಶಿಬಿರ ಕಾರ್ಯಕ್ರಮ ಅನ್ಸಾರಿಯಾ ಗಲ್ಪ್ ಆಡಿಟೋರಿಯಂ ನಲ್ಲಿ ನಡೆಯಿತು.
ಬಿಳ್ಕೋಡುಗೆ ಸಮಾರಂಭವನ್ನು ಸಯ್ಯದ್ ಕುಂಞಿಕೋಯ ತಂಙಳ್ ಉದ್ಘಾಟಿಸಿ ದುವಾಶಿರ್ವಚನ ನೀಡಿದರು.
ಸುಳ್ಯದಿಂದ ಪವಿತ್ರ ಹಜ್ ಯಾತ್ರಕೈಗೊಳ್ಳಲಿರುವ ಹಜ್ಜಾಜಿಗಳಿಗೆ ಸನ್ಮಾನಿಸಿ ಗೌರವಿಸಿದರು.
ಹಜ್ವತರಬೇತಿಯನ್ನು ಗಾಂಧಿನಗರ ಕೇಂದ್ರ ಜುಮ್ಮಾ ಮಸೀದಿ ಖತೀಬರಾದ ಅಶ್ರಫ್ ಖಾಮಿಲ್ ಸಖಾಫಿ ನೇರವೆರಿಸಿದರು.
ಅನ್ಸಾರ್ ಅಧ್ಯಕ್ಷ ಹಾಜಿ ಅಬ್ದುಲ್ಲಾ ಕಟ್ಟೆಕ್ಕಾರ್ ಅಧ್ಯಕ್ಷತೆ ವಹಿಸಿದ್ದರು.
ಗಾಂಧಿನಗರ ಜಮಾಯತ್ ಕಮಿಟಿ ಅಧ್ಯಕ್ಷ ಹಾಜಿ ಮಹಮ್ಮದ್ ಕೆಎಂಎಸ್,ಸುಳ್ಯ ಹಜ್ ಯಾತ್ರೆ ಸಂಯೋಜಕ ಹಸನ್ ಹಾಜಿ ,ಅನ್ಸಾರಿಯಾ ಅಧ್ಯಕ್ಷ ಅಬ್ದುಲ್ ಮಜೀದ್ ಜನತಾ, ಪ್ರಧಾನ ಕಾರ್ಯದರ್ಶಿ ಲತೀಫ್ ಹರ್ಲಡ್ಕ,ಸುಳ್ಯ ಯೋಜನಾ ಪ್ರಾಧಿಕಾರ ಅಧ್ಯಕ್ಷ ಹಾಜಿ ಮುಸ್ತಫಾ ಕೆಎಂ,ಸಲಾಹುದ್ದೀನ್ ಸಖಾಫಿ ಮಾಡನ್ನೂರು,ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು
ಗಾಂಧಿನಗರ ಜಮಾಯತ್ ಕಮಿಟಿ ನಿರ್ದೇಶಕ ಅಬ್ದುಲ್ ಮಜೀದ್ ಕೆಬಿ,ಕಾರ್ಯಕ್ರಮ ನಿರೂಪಿಸಿದರು.
ಅನ್ಸಾರುಲ್ ಮುಸ್ಲಿಮೀನ್ ಅಸೋಸಿಯೇಷನ್ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಸಹಕರಿಸಿದರು.