ಸುಳ್ಯ ಕೊಡಿಯಾಲಬೈಲಿನ ಮಹಾತ್ಮ ಗಾಂಧಿ ಮಲ್ನಾಡ್ ವಿದ್ಯಾಸಂಸ್ಥೆಯಲ್ಲಿ ಅಂಬೇಡ್ಕರ್ ಜಯಂತಿಯನ್ನು ಆಚರಿಸಲಾಯಿತು.
ಸಂಸ್ಥೆಯ ಸಂಚಾಲಕರಾದ ದೊಡ್ಡಣ್ಣ ಬರೆಮೇಲುರವರು ದೀಪ ಬೆಳಗಿಸಿ, ಅಂಬೇಡ್ಕರ್ ರವರ ಕುರಿತು ಮಾತನಾಡಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಶಿಕ್ಷಕ ವೃಂದದವರು ಮತ್ತು ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು.