ಪಂಜ ಭಾಜಪಾ ಕಾರ್ಯಕರ್ತರ ಭೇಟಿ ಕಾರ್ಯಕ್ರಮ ಆಗಮಿಸಿದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಮತ್ತು ಶಾಸಕಿ ಕು.ಭಾಗೀರಥಿ ಮುರುಳ್ಯ ರವರು ಶ್ರೀ ಶಾರದಾಂಬಾ ಭಜನಾ ಮಂದಿರಕ್ಕೆ ಭೇಟಿ ನೀಡಿ ಶ್ರೀ ದೇವಿಯ ಪ್ರಸಾದ ಸ್ವೀಕರಿಸಿದರು.
ಈ ವೇಳೆ ಅವರನ್ನು ಭಜನಾ ಮಂಡಳಿ ವತಿಯಿಂದ ಶಾಲು ಹೊದಿಸಿ ಗೌರವಿಸಿದರು. ಹಿರಿಯ ವೈದ್ಯರಾದ ಡಾ.ರಾಮಯ್ಯ ಭಟ್, ಭಜನಾ ಮಂಡಳಿ ಕೋಶಾಧಿಕಾರಿ ಲೋಕೇಶ್ ಬರೆಮೇಲು, ಭಾಜಪಾ ಸುಳ್ಯ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ, ಪೂರ್ವಾಧ್ಯಕ್ಷ ಹರೀಶ್ ಕಂಜಿಪಿಲಿ, ಶಿವರಾಮಯ್ಯ ಕರ್ಮಾಜೆ, ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷೆ ಶ್ರೀಮತಿ ಸುವರ್ಣಿನಿ ಎನ್ ಎಸ್, ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ವಿಜಯಲಕ್ಷ್ಮೀ ಜಳಕದಹೊಳೆ, ಉಪಾಧ್ಯಕ್ಷ ನಾರಾಯಣ ಕೃಷ್ಣನಗರ, ಸದಸ್ಯರು, ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಚಂದ್ರಶೇಖರ ಶಾಸ್ತ್ರಿ , ಉಪಾಧ್ಯಕ್ಷ ಸದಾನಂದ ಕಾರ್ಜ, ನಿರ್ದೇಶಕರು ಮೊದಲಾದವರು ಉಪಸ್ಥಿತರಿದ್ದರು. ಮಧುಕರ ಕುದ್ವ ಪ್ರಾರ್ಥಿಸಿದರು.