
ಪಡಿತರ ಚೀಟಿಯಲ್ಲಿ ಇ-ಕೆವೈಸಿ ಮಾಡಲು ಬಾಕಿ ಇರುವ ಸದಸ್ಯರು ಕೂಡಲೇ ತಮ್ಮ ವಾಸ್ತವ್ಯದ ಸಮೀಪದ ಅಥವಾ ರಾಜ್ಯದ ಯಾವುದೇ ನ್ಯಾಯಬೆಲೆ ಅಂಗಡಿಗೆ ಭೇಟಿ ಮಾಡಿ ಉಚಿತವಾಗಿ ಇ-ಕೆವೈಸಿ ಮಾಡಿಸಿ ಕೊಳ್ಳಿ, ತಪ್ಪಿದಲ್ಲಿ ಪಡಿತರ ಚೀಟಿಯಲ್ಲಿನ ಹೆಸರು ರದ್ದಾಗುವ ಸಂಭವವಿರುತ್ತದೆ.ಪಡಿತರ ಚೀಟಿ ಉಳಿಸಿಕೊಳ್ಳಲು ತಪ್ಪದೇ ಇ-ಕೆವೈಸಿ ಮಾಡಿಸಿಕೊಳ್ಳಲು ಆಹಾರ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.