Home Uncategorized ಸುಳ್ಯ ಮರಾಟಿ ಸಮಾಜ ಸೇವಾ ಸಂಘದ ವಾರ್ಷಿಕೋತ್ಸವ ಮತ್ತು ಕ್ರೀಡಾಕೂಟದ ಬಹುಮಾನ ವಿತರಣಾ ಕಾರ್ಯಕ್ರಮ

ಸುಳ್ಯ ಮರಾಟಿ ಸಮಾಜ ಸೇವಾ ಸಂಘದ ವಾರ್ಷಿಕೋತ್ಸವ ಮತ್ತು ಕ್ರೀಡಾಕೂಟದ ಬಹುಮಾನ ವಿತರಣಾ ಕಾರ್ಯಕ್ರಮ

0

ಮರಾಟಿ ಸಮಾಜ ಸೇವಾ ಸಂಘ ಸುಳ್ಯ ತಾಲೂಕು ಇದರ ಆಶ್ರಯದಲ್ಲಿ ಮರಾಟಿ ಮಹಿಳಾ ವೇದಿಕೆ, ಮರಾಟಿ ಯುವ ವೇದಿಕೆ ಮತ್ತು ಮರಾಟಿ ಧಾರ್ಮಿಕ ಚಿಂತನಾ ಸಮಿತಿ ಸಹಯೋಗದೊಂದಿಗೆ ವಾರ್ಷಿಕೋತ್ಸವ ಮತ್ತು ಕ್ರೀಡಾಕೂಟದ ಬಹುಮಾನ ವಿತರಣಾ ಸಮಾರಂಭ ಎ.27 ರಂದು ಸುಳ್ಯದ ಗಿರಿದರ್ಶಿನಿ ಸಭಾಭವನದಲ್ಲಿ ನಡೆಯಿತು.
ಸಭೆಯ ಅಧ್ಯಕ್ಷತೆಯನ್ನು ಮರಾಟಿ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಬಾಲಕೃಷ್ಣ ನಾಯ್ಕ್ ಅಜ್ಜಾವರ ವಹಿಸಿದ್ದರು.

ಗೌರವ ಉಪಸ್ಥಿತರಾಗಿದ್ದ ಮರಾಟಿ ಸಮಾಜ ಸೇವಾ ಸಂಘದ ಸ್ಥಾಪಕಾಧ್ಯಕ್ಷ ದೇವಪ್ಪ ನಾಯ್ಕ್ ಹೊನ್ನೇಡಿ, ಮಾಜಿ ಅಧ್ಯಕ್ಷರುಗಳಾದ ಡಾ.ಎಸ್.ರಂಗಯ್ಯ,ದಾಮೋದರ ಮಂಚಿ, ಎ.ಕೆ.ನಾಯ್ಕ್ ಚೊಕ್ಕಾಡಿ,ಗೋಪಾಲ ನಾಯ್ಕ್ ದೊಡ್ಡೇರಿ, ಶ್ರೀಮತಿ ಗಿರಿಜ ಎಂ.ವಿ,ಸೀತಾನಂದ ಬೇರ್ಪಡ್ಕ, ಜಿ.ಬುದ್ಧ ನಾಯ್ಕ್, ಗೌರವಾಧ್ಯಕ್ಷ ಜನಾರ್ದನ ಬಿ.ಕುರುಂಜಿಭಾಗ್ ಮಾತನಾಡಿದರು. ವೇದಿಕೆಯಲ್ಲಿ ಮರಾಟಿ ಮಹಿಳಾ ವೇದಿಕೆಯ ಅಧ್ಯಕ್ಷೆ ಶ್ರೀಮತಿ ರೇವತಿ ದೊಡ್ಡೇರಿ, ಯುವ ವೇದಿಕೆಯ ಕಾರ್ಯದರ್ಶಿ ಮಿಥುನ್ ನಾಯ್ಕ್ ಶಾಂತಿನಗರ, ಮರಾಟಿ ಸಮಾಜ ಸೇವಾ ಸಂಘದ ಉಪಾಧ್ಯಕ್ಷೆ ಶ್ರೀಮತಿ ಸುಲೋಚನಾ ನಾರಾಯಣ, ಪ್ರಧಾನ ಕಾರ್ಯದರ್ಶಿ ರಮೇಶ್ ನೀರಬಿದಿರೆ, ಕೋಶಾಧಿಕಾರಿ ಐತ್ತಪ್ಪ ನಾಯ್ಕ್ ಎನ್. ಉಪಸ್ಥಿತರಿದ್ದರು.


ಈ ಸಂದರ್ಭದಲ್ಲಿ ಫೆ.9 ರಂದು ಗಿರಿದರ್ಶಿನಿ ವಠಾರದಲ್ಲಿ ನಡೆದ ಕ್ರೀಡಾಕೂಟದಲ್ಲಿ ವಿಜೇತರಾದ ಸ್ಪರ್ಧಿಗಳಿಗೆ ಬಹುಮಾನ ವಿತರಣೆ ನಡೆಯಿತು.

ಕಾರ್ಯಕ್ರಮದಲ್ಲಿ ಮ.ಸ.ಸೇ.ಸಂಘದ ಕಾರ್ಯಕಾರಿ ಸಮಿತಿ ಸದಸ್ಯೆ ಶ್ರೀಮತಿ ಶೋಭಾ ಎ.ಕೆ.ನಾಯ್ಕ್ ಪ್ರಾರ್ಥಿಸಿದರು. ಪ್ರ.ಕಾರ್ಯದರ್ಶಿ ರಮೇಶ್ ನೀರಬಿದಿರೆ ಸ್ವಾಗತಿಸಿದರು.ಕಾರ್ಯಕಾರಿ ಸಮಿತಿ ಸದಸ್ಯರಾದ ಭವಾನಿಶಂಕರ ಕಲ್ಮಡ್ಕ ಬಹುಮಾನ ವಿಜೇತರ ಪಟ್ಟಿ ವಾಚಿಸಿದರು. ಈಶ್ವರ ವಾರಣಾಶಿ ಕಾರ್ಯಕ್ರಮ ನಿರೂಪಿಸಿದರು.
ಬೆಳಿಗ್ಗೆ ಸಾಂಸ್ಕೃತಿಕ ಕಾರ್ಯಕ್ರಮವನ್ನು ಮರಾಟಿ ಸಮಾಜ ಸೇವಾ ಸಂಘದ ಅಧ್ಯಕ್ಷ ಬಾಲಕೃಷ್ಣ ನಾಯ್ಕ್ ಅಜ್ಜಾವರ ದೀಪ ಬೆಳಗಿಸಿ ಉದ್ಘಾಟಿಸಿ, ಶುಭ ಹಾರೈಸಿದರು.ಕಾರ್ಯಕಾರಿ ಸಮಿತಿ ಸದಸ್ಯರು, ಮಹಿಳಾ ವೇದಿಕೆ, ಯುವ ವೇದಿಕೆಯ ಸದಸ್ಯರು ಉಪಸ್ಥಿತರಿದ್ದರು. ಬಳಿಕ ಸಮಾಜ ಬಾಂಧವರಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

NO COMMENTS

error: Content is protected !!
Breaking