
“ಆಪರೇಷನ್ ಸಿಂಧೂರ” ಕಾರ್ಯಾಚರಣೆಯ ಯಶಸ್ವಿ ಹಿನ್ನೆಲೆಯಲ್ಲಿ ಭಾರತೀಯ ಸೇನೆಗೆ ಮತ್ತಷ್ಟು ಶಕ್ತಿ ತುಂಬುವ ಸಲುವಾಗಿ ಬೆಳ್ಳಾರೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥಿಸಿ, ಸಂಕಲ್ಪದೊಂದಿಗೆ ಶ್ರೀ ದೇವರಿಗೆ ವಿಶೇಷ ಪೂಜೆ ನಡೆಯಿತು.
ದೇವಸ್ಥಾನದ ಪ್ರಧಾನ ಅರ್ಚಕ ಉದಯಕುಮಾರ್ ಕೆ.ಟಿ ಪೂಜಾ ಕಾರ್ಯ ನೆರವೇರಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುರೇಶ್ ಕುಮಾರ್ ಶೆಟ್ಟಿ ಪನ್ನೆಗುತ್ತು ಹಾಗೂ ಸಮಿತಿ ಸದಸ್ಯರು,ಭಕ್ತಾದಿಗಳು ಹಾಗೂ ದೇವಸ್ಥಾನದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.