
ದುಗ್ಗಲಡ್ಕದ ಶ್ರೀ ದುಗ್ಗಲಾಯ ದೈವಸ್ಥಾನದಲ್ಲಿ ಕ್ಷೇತ್ರಕ್ಕೆ ಸಂಬಂಧಿಸಿದಂತೆ ತಿಳಿಯಲು ಮತ್ತು ಅಭಿವೃದ್ಧಿ ವಿಚಾರವಾಗಿ ಒಂದು ದಿನದ ಪ್ರಶ್ನೆಯನ್ನು ಇರಿಸಲಾಯಿತು.

ಜ್ಯೋತಿಷ್ಯರಾದ ಸಜೀಶ್ ಬೇಂಗತಡ್ಕ ಪ್ರಶ್ನಾ ಚಿಂತನೆ ನಡೆಸಿದರು. ಮುಂದೆ ನಡೆಯಬೇಕಾದ ಪ್ರಾಯಶ್ಚಿತ ಕಾರ್ಯಗಳ ಬಗ್ಗೆ ಚಿಂತನೆ ನಡೆಸಿದರು.
ಈ ಸಂದರ್ಭದಲ್ಲಿ ದೈವಸ್ಥಾನದ ಆಡಳಿತ ಮೊಕ್ತೇಸರರಾದ ರಾಘವೇಂದ್ರ ಭಟ್ ಕಲ್ದಂಬೆ, ಅಧ್ಯಕ್ಷ ಕುಶಾಲಪ್ಪ ಗೌಡ ಕಜೆ, ಗೌರವಾಧ್ಯಕ್ಷ ಸುಂದರ ರಾವ್, ಮಾಜಿ ಅಧ್ಯಕ್ಷ ದಯಾನಂದ ಸಾಲಿಯಾನ್, ಕಾರ್ಯದರ್ಶಿ ಶೇಖರ ಕುದ್ಪಾಜೆ, ಹಿರಿಯರಾದ ಪುರುಷೋತ್ತಮ ಗೌಡ ಮಾಣಿಬೆಟ್ಟು, ನ.ಪಂ.ಸದಸ್ಯ ಬಾಲಕೃಷ್ಣ ರೈ ದುಗ್ಗಲಡ್ಕ, ಮಹಿಳಾ ಸೇವಾ ಸಮಿತಿ ಅಧ್ಯಕ್ಷೆ ಪ್ರಭಾವತಿ ರೈ, ಯುವ ಸೇವಾ ಸಮಿತಿ ಅಧ್ಯಕ್ಷ ನಾರಾಯಣ ನಾಯ್ಕ್ , ಸಮಿತಿಗಳ ಸದಸ್ಯರು, ಊರ ಭಕ್ತಾದಿಗಳು ಉಪಸ್ಥಿತರಿದ್ದರು.