ನೆಟ್ಟಾರು ಸಮೀಪ ಪಿಕಪ್ ವಾಹನವೊಂದು ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡು ಸುಟ್ಟು ಹೋದ ಘಟನೆ ಮೇ.11 ರಂದು ಬೆಳಿಗ್ಗೆ ನಡೆದಿದೆ.
ಬೆಳ್ಳಾರೆ ಕಡೆಯಿಂದ ಪುತ್ತೂರು ಕಡೆಗೆ ಹೋಗುತ್ತಿರುವ ಪಿಕಪ್ ವಾಹನ ನೆಟ್ಟಾರು ತಿರುವಿನಲ್ಲಿ ಆಕಸ್ಮಿಕವಾಗಿ ಎದುರು ಭಾಗದಲ್ಲಿ ಬೆಂಕಿ ಹತ್ತಿಕೊಂಡು ಉರಿಯಿತು.


ಚಾಲಕ ಕೂಡಲೇ ವಾಹನ ನಿಲ್ಲಿಸಿ ಬೆಂಕಿ ನಂದಿಸಲು ಪ್ರಯತ್ನಿಸಿದರು ಆದರೆ ಬೆಂಕಿ ವಿಪರೀತ ಹತ್ತಿಕೊಂಡು ಉರಿಯಿತು.
ಸ್ಥಳಕ್ಕೆ ಬೆಳ್ಳಾರೆ ಪೊಲೀಸರು ಹಾಗೂ ಸ್ಥಳೀಯರು ಆಗಮಿಸಿದ್ದು ಬೆಂಕಿ ನಂದಿಸುತ್ತಿರುವುದಾಗಿ ತಿಳಿದುಬಂದಿದೆ.
