
ಸಿ.ಬಿ.ಎಸ್.ಇ 10ನೇ ತರಗತಿ ಪರೀಕ್ಷೆಯಲ್ಲಿ ಬೆಳ್ಳಾರೆ ಜ್ಞಾನಗಂಗಾ ಸೆಂಟ್ರಲ್ ಸ್ಕೂಲ್ ನ ವಿದ್ಯಾರ್ಥಿನಿ ಕು. ತ್ರಾಯಿ ಭಟ್ 99% ಅಂಕಗಳೊಂದಿಗೆ ಜಿಲ್ಲೆಗೆ ಪ್ರಥಮ ಸ್ಥಾನಿಯಾಗಿದ್ದಾರೆ. ಸೈನ್ಸ್, ಸೋಶಿಯಲ್ ಸ್ಟಡೀಸ್ ಮತ್ತು ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ವಿಷಯಗಳಲ್ಲಿ ತಲಾ 100 ಅಂಕಗಳು ಗಣಿತ 99 ಮತ್ತು ಇಂಗ್ಲೀಷ್ ನಲ್ಲಿ 96 ಅಂಕಗಳನ್ನು ಪಡೆದು ವಿಶೇಷ ಸಾಧನೆ ಮೆರೆದಿದ್ದಾರೆ.