ದುಗ್ಗಲಡ್ಕ; ಕೊಯಿಕುಳಿ ಶ್ರೀಕೃಷ್ಣ ಮಂದಿರದಲ್ಲಿ ವಾರ್ಷಿಕೋತ್ಸವದ ಅಂಗವಾಗಿ ಶ್ರೀಸತ್ಯನಾರಾಯಣ ದೇವರ ಪೂಜೆ

0

ಭಾರತೀಯ ಸೈನಿಕರಿಗೆ ಒಳಿತಾಗಲು ವಿಶೇಷ ಪ್ರಾರ್ಥನೆ

ದುಗ್ಗಲಡ್ಕ ಕೊಯಿಕುಳಿ ಶ್ರೀ ಕೃಷ್ಣ ಮಂದಿರದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವದ ಅಂಗವಾಗಿ ಶ್ರೀ ಸತ್ಯನಾರಾಯಣ ದೇವರ ಪೂಜೆ ಮೇ.೧೨ ರಂದು ಸಂಜೆ ನಡೆಯಿತು. ಈ ಸಂದರ್ಭದಲ್ಲಿ ಆಪರೇಶನ್ ಸಿಂಧೂರ ಕಾರ್ಯಾಚರಣೆ ಮಾಡಿದ ಸೈನಿಕರಿಗೆ ಒಲಿತಾಗಲು ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.

ವಾರ್ಷಿಕೋತ್ಸವದ ಅಂಗವಾಗಿ ಭಜನೆ, ಸತ್ಯನಾರಾಯಣ ದೇವರ ಪೂಜೆ ನಡೆದು,ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನೆರವೇರಿತು.

ಈ ಸಂದರ್ಭದಲ್ಲಿ ಪೆಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತಿಕಾರವಾಗಿ ನಡೆದ ಆಪರೇಶನ್ ಸಿಂಧೂರ ಕಾರ್ಯಾಚರಣೆ ಯಶಸ್ಸಿಗೆ ಭಾರತೀಯ ಸೈನಿಕರಿಗೆ ಅಭಿನಂದನೆ ಸಲ್ಲಿಸಿ, ಅವರಿಗೆ ಒಲಿತಾಗಲಿ ಮತ್ತು ದೇಶಕ್ಕೆ ಒಳ್ಳೆಯದಾಗಲಿ ಎಂದು ಪ್ರಾರ್ಥಿಸಲಾಯಿತು.

ಮಂದಿರಕ್ಕೆ ಮಿತ್ರ ಯುವಕ ಮಂಡಲದ ಪೂರ್ವಾಧ್ಯಕ್ಷ ಚೇತನ್ ಕಲ್ಮಡ್ಕ ಗೋಡೆಗಡಿಯಾರ ಕೊಡುಗೆಯಾಗಿ ನೀಡಿದರು.

ಈ ಸಂದರ್ಭದಲ್ಲಿ ಮಂದಿರದ ಸೇವಾ ಸಮಿತಿ ಅಧ್ಯಕ್ಷ ಶಶಿಧರ ಎಂ.ಜೆ., ಕಾರ್ಯದರ್ಶಿ ಭವಾನಿಶಂಕರ ಕಲ್ಮಡ್ಕ, ಕೋಶಾಧಿಕಾರಿ ಭಾಸ್ಕರ ಪೂಜಾರಿ ಬಾಜಿನಡ್ಕ, ಹಾಗೂ ಸಮಿತಿಯ ಸದಸ್ಯರು, ಊರ ಭಕ್ತಾದಿಗಳು ಉಪಸ್ಥಿತರಿದ್ದರು.

ಸುಬ್ರಹ್ಮಣ್ಯ ಭಟ್ ರೆಂಜಾಳ ಮತ್ತು ಬಳಗದವರು ವೈದಿಕ ಕಾರ್ಯ ನಡೆಸಿಕೊಟ್ಟರು.