ಸುಳ್ಯ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ಮೆಟ್ರಿಕ್ ಪೂರ್ವ ಬಾಲಕರ ಹಾಗೂ ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, || ಎ, 11ಬಿ. ಎ.1ಬಿ, ಪ.ಜಾತಿ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ 2025-26ನೇ ಸಾಲಿಗೆ ಆನೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ದಿನಾಂಕ: 16-06-2025 ಕ್ಕೆ ಅರ್ಜಿ ಸಲ್ಲಿಸುವ ಅಂತಿಮ ದಿನಾಂಕವನ್ನು ನಿಗದಿಪಡಿಸಲಾಗಿದೆ. ಅರ್ಹ ವಿದ್ಯಾರ್ಥಿಗಳು ವಿದ್ಯಾರ್ಥಿನಿಲಯದ ಸದುಪಯೋಗ ಪಡಿಸಿಕೊಳ್ಳಲು ಸೂಚಿಸಿದೆ.
ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ : ಪ್ರವರ್ಗ-1, ಎಸ್.ಸಿ. ಮತ್ತು ಎಸ್.ಟಿ. ರೂ..2.50 ಲಕ್ಷ, ಪ್ರವರ್ಗ 11ಎ., 11 ಬಿ., 111ಎ., 111ಬಿ. ಇತರೆ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ 1.00 ಲಕ್ಷ,
ಅರ್ಜಿಯನ್ನು http://shp.karnataka.gov.in/bcwd ನಲ್ಲಿ ಸಲ್ಲಿಸಬೇಕು.

ತಾಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್ಸೈಟ್ http://bcwd.karnataka.gov.in/.
ಹೆಚ್ಚಿನ ಮಾಹಿತಿಗಾಗಿ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಯವರ ಕಛೇರಿ ದೇವರಾಜ ಅರಸು ಭವನ ಕೊಡಿಯಾಲ್ ಬೈಲು ಸುಳ್ಯ ಇವರನ್ನು ಸಂಪರ್ಕಿಸಬಹುದು, ದೂರವಾಣಿ ಸಂಖ್ಯೆ: 08257-230659.